ನಾಳೆ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರ್ಪಡೆ

ನಾಳೆ ಶಾಸಕ ಹೆಚ್. ನಾಗೇಶ್ ಕಾಂಗ್ರೆಸ್ ಸೇರ್ಪಡೆ

ಕೋಲಾರ: ಬಿಜೆಪಿ ಬೆಂಬಲಿತ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಹೆಚ್.ನಾಗೇಶ್ ಜನವರಿ 14 ರಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಖಚಿತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ನಾಗೇಶ್, ಜ.14ರ ನಾಳೆ ಸಂಕ್ರಾಂತಿಯಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ರಾಜೀನಾಮೆ ನೀಡಿರುವ ವಿಚಾರವನ್ನು ಈವರೆಗೂ ಯಾರ ಜೊತೆಗೂ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ವರಿಷ್ಠರು ಯಾವ ಕ್ಷೇತ್ರ ಹೇಳ್ತಾರೋ ಆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೇನೆ ಎಂದರು.