ನಾಳೆ ಸಚಿವ ಎಸ್.ಟಿ.ಸೋಮಶೇಖರ್ ಕೊಡಗು ಜಿಲ್ಲಾ ಪ್ರವಾಸ

ಬೆಂಗಳೂರು : ರಾಜ್ಯದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಜನವರಿ 25 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ.
ಜ.25ರಂದು ಬೆಳಗ್ಗೆ 11 ಗಂಟೆಗೆ ಆಗಮಿಸುವ ಅವರು ಪೊನ್ನಂಪೇಟೆ ತಾಲೂಕಿನ ಹಾತೂರು ನಂ.2784ನೇ ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣದ ಉದ್ಘಾಟನೆ ಮಾಡಲಿದ್ದಾರೆ.ನಂತರ ಮಧ್ಯಾಹ್ನ 2.30ಕ್ಕೆ ಪೊನ್ನಪ್ಪಸಂತೆಯಲ್ಲಿ 527ನೇ ಬಾಳೆಲೆ ಪ್ರಾಥಮಿಕ ಕೃಷಿ ಸಹಕಾರ ಸಂಘದ ನೂತನ ವಾಣಿಜ್ಯ ಮಳಿಗೆಗಳನ್ನು ಪೊನ್ನಪ್ಪ ಸಂತೆ ಆವರಣದಲ್ಲಿ ಉದ್ಘಾಟಿಸಲಾಗುವುದು ಎಂದು ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಸಿ.ಸುಬ್ರಮಣ್ಯಗೌಡ ತಿಳಿಸಿದರು.