ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ಕಂಟ್ರೋಲ್ ಸಭೆ: ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ?

ಬೆಳಗಾವಿ: ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ನಾಳೆ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.