ನಾಳೆ ಸುಪ್ರೀಂಕೋರ್ಟ್ ನಲ್ಲಿ ಗಡಿ ಅರ್ಜಿ ವಿಚಾರಣೆ; ಪೊಲೀಸರಿಂದ ಹೈಅಲರ್ಟ್

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‍ಗಳ ಮೇಲೆ ಕಲ್ಲು ತೂರಾಟ ಮಸಿ ಬಳಿದ ಪ್ರಕರಣ ಸೇರಿದಂತೆ ನಾಳೆ ಸುಪ್ರೀಂ ಕೋರ್ಟ್‍ನಲ್ಲಿ ಗಡಿ ವಿವಾದ ವಿಚಾರಣೆ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಹೈವೋಲ್ಟೆಜ್ ಮೀಟಿಂಗ್ ನಡೆಯುತ್ತಿದೆ. ಸುಪ್ರೀಂ ಕೋರ್ಟ್‍ನಲ್ಲಿ ಅಂತಿಮ ಹಂತದ ವಿಚಾರಣೆಯಲ್ಲಿ ಏನೇ ಆದರೂ ಕಾನೂನು ಸುವ್ಯವಸ್ಥೆ ಹದಗೆಡದಂತೆ ಗಡಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ.