ನಾಳೆಯಿಂದ ಜೆಡಿಎಸ್ ನ ಪಂಚರತ್ನ ರಥಯಾತ್ರೆ ; ಬೃಹತ್ ಸಮಾವೇಶ

ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ “ಪಂಚರತ್ನ” ರಥಯಾತ್ರೆಗೆ ನಾಳೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಚಾಲನೆ ದೊರೆಯಲಿದೆ. ಈ ಹಿನ್ನೆಲೆ, ಮುಳಬಾಗಿಲು ಪಟ್ಟಣದ ಹೊರವಲಯದಲ್ಲಿ ನಾಳೆ ಬೃಹತ್ ಸಮಾವೇಶ ಆಯೋಜಿಸಲಾಗಿದೆ.
ಈ ಮೊದಲು ನವೆಂಬರ್ 1 ರಂದು ನಿಗದಿಯಾಗಿದ್ದ “ಪಂಚರತ್ನ” ರಥಯಾತ್ರೆ ಕಾರ್ಯಕ್ರಮ ಮಳೆಯಿಂದಾಗಿ ರದ್ದಾಗಿತ್ತು. ನಾಳೆ ನಡೆಯುವ ಸಮಾವೇಶದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ.
ಈಗಾಗಲೇ ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, 40 ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ಸ್ಥಳದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಬೃಹತ್ ಕಟೌಟ್ ಅಳವಡಿಸಲಾಗಿದೆ.