ನಾಳೆಯಿಂದ ರಾಜ್ಯಾಧ್ಯಂತ '108 ಆಂಬುಲೆನ್ಸ್ ಸೇವೆ' ಸ್ಥಗಿತ
ನಾಳೆಯಿಂದ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವ GVK ವೇತನವನ್ನ ಬಾಕಿ ಉಳಿಸಿಕೊಂಡಿದೆ. ವೇತನವಿಲ್ಲದೇ ನೌಕರರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಹೀಗಾಗಿ ನಾಳೆ ಸಂಜೆಯಿಂದ ಆಂಬುಲೆನ್ಸ್ ಸೇವೆ ಸ್ಥಗಿತದಿಂದ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾದರೇ ಅದಕ್ಕೆ GVK ಸಂಸ್ಥೆಯೇ ನೇರ ಕಾರಣ ಎಂಬುದಾಗಿ 108 ಆಂಬುಲೆನ್ಸ್ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಪರಮಶಿವಯ್ಯ ತಿಳಿಸಿದ್ದಾರೆ