ನಾವು ಅಧಿಕಾರಕ್ಕೆ ಬಂದ್ರೆ ಬಂದ್ರೆ 2ಬಿ ಮೀಸಲಾತಿ ಮರುಜಾರಿ : ಹೆಚ್.ಡಿ. ರೇವಣ್ಣ ಹೇಳಿಕೆ
ಹಾಸನ :ಬಿಜೆಪಿಯವರು ದುರುದ್ದೇಶದಿಂದಲೇ ಮುಸ್ಲಿಮರಿಗಿದ್ದ 2ಬಿ ಮೀಸಲಾತಿಯನ್ನು ರದ್ದು ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ 2ಬಿ ಮೀಸಲಾತಿಯನ್ನು ಜಾರಿ ಮಾಡುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1994 ರಲ್ಲಿ ಹೆಚ್.ಡಿ.ದೇವೇಗೌಡರು ಮುಸ್ಲಿಮರಿಗೆ 2ಬಿ ಮೀಸಲಾತಿ ಕಲ್ಪಿಸಿದ್ದರು. ಆದರೆ ಬಿಜೆಪಿ ಸರ್ಕಾರ ದುರುದ್ದೇಶದಿಂದಲೇ 2ಬಿ ಮೀಸಲಾತಿಯನ್ನು ರದ್ದುಗೊಳಿಸಿದೆ. ನಾವು ಅಧಿಕಾರಕ್ಕೆ ಬಂದರೆ ಮತ್ತೆ 2ಬಿ ಮೀಸಲಾತಿಯನ್ನು ಜಾರಿಗೆ ತರುತ್ತೇವೆ ಎಂದರು.
ಕಾಂಗ್ರೆಸ್ ನವರು ಕೇವಲ ಅಲ್ಪಸಂಖ್ಯಾತರ ಮತ ಹಾಕಿಸಿಕೊಳ್ಳುತ್ತಿದ್ದರು. ಕಾಂಗ್ರೆಸ್ ನವರು ಮುಸ್ಲಿಮರಿಗೆ ಯಾವುದೇ ಮೀಸಲಾತಿ ಕೊಟ್ಟಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.