ನಾವು ಕಾಂಗ್ರೆಸ್ ನಾಯಕರ ರೀತಿ ಅಗ್ರೆಸಿವ್ ಆಗಿ ಮಾತನಾಡುತ್ತಿಲ್ಲ: ಸಚಿವ ಜೆ.ಸಿ ಮಧುಸ್ವಾಮಿ
ತುಮಕೂರು: ನಾವು ಕಾಂಗ್ರೆಸ್ ನಾಯಕರ ರೀತಿ ಅಗ್ರೆಸಿವ್ ಆಗಿ ಮಾತನಾಡುತ್ತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಾನೂನು ಸಚಿವ ಜೆ.ಸಿ ಮಧುಸ್ವಾಮಿ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಸೇರಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲೇಬೇಕು.
ವಿರೋದಿಗಳನ್ನು ಆಡೋಕೆ ಬಿಟ್ಟರೆ ಆಡ್ತಾನೆ ಇರುತ್ತಾರೆ. ಅಮಾಯಕ ಜನರಿಗೆ ವಿರೋಧಿಗಳು ಹೇಳುವುದು ಸತ್ಯ ಎನಿಸುತ್ತೆ. ಕೋರ್ಟ್ ನಲ್ಲಿ ಎದುರು ಪಾರ್ಟಿ ವಿಚಾರಣೆಗೆ ಹಾಜರಾಗದೇ ಇದೆ.ಇನ್ನೊಂದು ಪಕ್ಷದ ಪರ ಆದೇಶ ಬರುತ್ತದೆ. ಅಭಿವೃದ್ಧಿ ಪದದ ಕಾಗುಣಿತ ಗೊತ್ತಿಲ್ಲದ ವ್ಯಕ್ತಿ ನನ್ನ ಎದುರಾಳಿಯಾಗಿದ್ದಾರೆ. ಹಾಗಾಗಿ ನನ್ನ ವಿರುದ್ಧ ಸ್ಪರ್ಧಿಸಿ ಎಂದು ಸಿದ್ದರಾಮಯ್ಯಗೆ ಹೇಳಿದ್ದೇನೆ. ನೇವೇ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಎಂದಿದ್ದೇನೆ. ಆಗ ಸಮಬಲ ಹೋರಾಟ ನಡೆಯುತ್ತದೆ. ಗೌರವ ಇರುತ್ತದೆ. ಇಬ್ಬರು ಸರಿಯಾಗಿ ಕುಸ್ತಿ ಆಡಬಹುದು ಎಂದಿದ್ದಾರೆ.