ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿಗೆ ಸವಾಯಿ ಗಂಧರ್ವರ ಹೆಸರಿಡಲು ಜೋಶಿ ಮನವಿ

ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿಗೆ ಸವಾಯಿ ಗಂಧರ್ವರ ಹೆಸರಿಡಲು ಜೋಶಿ ಮನವಿ

ಧಾರವಾಡ : ಹಜರತ್ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿಗೆ ಸವಾಯಿ ಗಂಧರ್ವ ಎಕ್ಸ್ ಪ್ರೆಸ್ ರೈಲು ಎಂದು ಮರುನಾಮಕರಣ ಮಾಡುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದಾರೆ.

ಮೇಲ್ದರ್ಜೆಗೇರಿದ ಧಾರವಾಡ ರೈಲು ನಿಲ್ದಾಣದ ಉದ್ಘಾಟನೆಗೆ ಬಂದಿದ್ದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಜೋಶಿ ಅವರು ವೇದಿಕೆಯಲ್ಲೇ ಈ ಮನವಿ ಮಾಡಿದರು.

ಅಲ್ಲದೇ, ವಂದೇ ಭಾರತ್ ರೈಲನ್ನು ಧಾರವಾಡದಿಂದ ಬೆಂಗಳೂರಿಗೆ ಹೊಸದಾಗಿ ಆರಂಭಿಸಬೇಕು ಎಂದು ಮನವಿ ಮಾಡಿದ ಪ್ರಲ್ಹಾದ್ ಜೋಶಿ ಅವರು, ತಪೋವನ ಬಳಿಯ ರೈಲ್ವೆ ಬ್ರಿಜ್ ಮೇಲ್ದರ್ಜೆಗೇರಿಸಲು ಅನುದಾನ ಬಿಡುಗಡೆ ಮಾಡುವಂತೆಯೂ ಕೋರಿದರು.

ಪ್ರಲ್ಹಾದ್ ಜೋಶಿ ಅವರ ಮನವಿಗೆ ತಕ್ಷಣವೇ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಶೀಘ್ರದಲ್ಲೇ ಹಜರತ್ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿಗೆ ಸವಾಯಿ ಗಂಧರ್ವ ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡುವುದಾಗಿ ತಿಳಿಸಿದರು. ಅಲ್ಲದೇ, ಇನ್ನಿತರ ಬೇಡಿಕೆಗಳಿಗೂ ಸಹ ಅವರು ಸ್ಪಂದಿಸಿದರು.