ನಿನ್ನೆಗಿಂತ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,430 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,874 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 26,618 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 5,82,727 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,27,15,971 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,41,707 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.