ನಿನ್ನೆಗಿಂತ ಹೆಚ್ಚಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಇಂದು ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 811 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿದ್ದು, 24 ಗಂಟೆಯಲ್ಲಿ ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ.
ನಿನ್ನೆ 70,678 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,75,22,436 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,29,097 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.