ನಿಮಗೆ ಧಮ್ಮಯ್ಯ ಅಂತೀನಿ..ಈ ಸುಧಾಕರ್ ನನ್ನು ಸೋಲಿಸಿ' ಎಂದ ಸಿದ್ದರಾಮಯ್ಯ

ನಿಮಗೆ ಧಮ್ಮಯ್ಯ ಅಂತೀನಿ..ಈ ಸುಧಾಕರ್ ನನ್ನು ಸೋಲಿಸಿ' ಎಂದ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ನಿಮಗೆ ಧಮ್ಮಯ್ಯ ಅಂತೀನಿ ಈ ಸುಧಾಕರ್ ನನ್ನು ಸೋಲಿಸಿ, ಮತ್ತೆ ಈತ ಶಾಸಕನಾಗಬಾರದು ಎಂದು ಜನರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಕಾಂಗ್ರೆಸ್ ವಿರುದ್ಧ ಸಚಿವ ಸುಧಾಕರ್ ಭ್ರಷ್ಟಾಚಾರ ಆರೋಪ ಮಾಡಿದ್ದು, ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಇಂದು ಚಿಕ್ಕಬಳ್ಳಾಪುರದ ಕೆ.ವಿ ಕ್ಯಾಂಪಸ್ ಬಳಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ ನಿಮಗೆ ಧಮ್ಮಯ್ಯ ಅಂತೀನಿ ಈ ಸುಧಾಕರ್ ನನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ, ಮತ್ತೆ ಈತ ಶಾಸಕನಾಗಬಾರದು ಎಂದಿದ್ದಾರೆ. ಚಿಕ್ಕಬಳ್ಳಾಪುರ ಜನ ಯಾರಿಗೆ ಹೇಳುತ್ತಿರಿ ಅವರಿಗೆ ಟಿಕೆಟ್ ಕೊಡುತ್ತೇನೆ, ಆದರೆ ಈ ಸುಧಾಕರ್ ಮಾತ್ರ ಗೆಲ್ಲಬಾರದು ಎಂದು ಸಿದ್ದರಾಮಯ್ಯ ಹೇಳಿದರು. ನಾನು ಕೋಲಾರದಲ್ಲಿ ನಿಲ್ಲುತ್ತೀನೋ ಇಲ್ವೋ.. ಅವರಿಗ್ಯಾಕೆ ನನ್ನ ಸ್ಪರ್ಧೆಗೂ ಯಡಿಯೂರಪ್ಪಗೆ ಏನು ಸಂಬಂಧ ಎಂದು ಯಡಿಯೂರಪ್ಪಗೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಸುಧಾಕರ್ ಗೆ ಡಿಕೆಶಿ ತಿರುಗೇಟು

ಆಪರೇಷನ್ ಕಮಲಕ್ಕೆ ಬಲಿಯಾಗಿ ಬಾಂಬೆಗೆ ಓಡಿ ಹೋಗಿದ್ದ ಸುಧಾಕರ್ ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಆಪರೇಷನ್ ಕಮಲಕ್ಕೆ ಬಲಿಯಾಗಿ ಬಾಂಬೆಗೆ ಓಡಿ ಹೋಗಿದ್ದ ಸುಧಾಕರ್ ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾನೆ, ಅಂದು ಭ್ರಷ್ಟಾಚಾರ ನಡೆಯುತ್ತಿರುವಾಗ ನಮ್ಮ ಜೊತೆಯಲ್ಲೇ ಇದ್ದ ಸುಧಾಕರ್ ಈಗ ಮಾತನಾಡುತ್ತಿದ್ದಾನೆ, ಅಂದು ಸುಮ್ಮನಿದ್ದ ಅಸಾಮಿ ಈಗ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾನೆ ಎಂದು ಟಾಂಗ್ ನೀಡಿದ್ದಾರೆ.

ನಾವು ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಚಿಕ್ಕಬಳ್ಳಾಪುರದ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿ, ಎಲ್ಲರಿಗೂ ಅಧಿಕಾರ ಹಂಚುತ್ತೇನೆ. ನಾವು 'ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವುದೇ ಭವಿಷ್ಯ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. .ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವುದೇ ಭವಿಷ್ಯ ಇಲ್ಲ, ಹಾಗಾಗಿ ಕೆಲವರು ಕಾಂಗ್ರೆಸ್ ಗೆ ಬಂದಿದ್ದಾರೆ ಎಂದರು. ಎಲ್ಲರೂ ಕಾಂಗ್ರೆಸ್ ಗೆ ಮತ ನೀಡಿ ಕಾಂಗ್ರೆಸ್ ಗೆಲ್ಲಿಸಿ ಎಂದರು. ಚಿಕ್ಕಬಳ್ಳಾಪುರದ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿ, ಎಲ್ಲರಿಗೂ ಅಧಿಕಾರ ಹಂಚುತ್ತೇನೆ. ನಾವು 'ನುಡಿದಂತೆ ನಡೆಯದಿದ್ರೆ ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.