ನಿಮ್ಮ ಕಣ್ಣಿನ ದೃಷ್ಟಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ಜಿಂಕೆಯನ್ನು ಗುರುತಿಸಿ!
ನವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ.
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion) ಎಂದು ಕರೆಯುತ್ತೇವೆ.
ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ನೀವು ಅರಣ್ಯ ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಜಿಂಕೆ (Deer) ಯೊಂದು ನಿಂತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅರಣ್ಯ ಪ್ರದೇಶ ಬಣ್ಣ ಮತ್ತು ಜಿಂಕೆ ಬಣ್ಣಕ್ಕೆ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿವೆ. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಜಿಂಕೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್ ಸಮಯದಲ್ಲಿ ನೀವು ಜಿಂಕೆಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್ ಮಾರ್ಕ್ಸ್ ಕೊಟ್ಟುಬಿಡಿ. ಒಂದು ವೇಳೆ ಜಿಂಕೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್)