'ನಿಮ್ಮ ವಿಭಿನ್ನ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆದ್ರೆ ನೀವೇ ಹೊಣೆ' : ಸಿದ್ದು-ಡಿಕೆಶಿಗೆ ಕೆ.ಸಿ ವೇಣುಗೋಪಾಲ್ ಖಡಕ್ ಸೂಚನೆ
ಬೆಂಗಳೂರು : ತಮ್ಮ ವಿಭಿನ್ನ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾದರೆ ಅದಕ್ಕೆ ನೀವೆ ಹೊಣೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಖಡಕ್ ಸೂಚನೆ ನೀಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದೆ. ಸಭೆ ಬಳಿಕ ಕೆ.ಸಿ ವೇಣುಗೋಪಾಲ್ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಖಡಕ್ ಸೂಚನೆ ನೀಡಿದ್ದಾರೆ.
ನೀವು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು, ನಿಮ್ಮ ಹೇಳಿಕೆಗಳೇ ಪಕ್ಷಕ್ಕೆ ಮುಳುವಾಗಬಹುದು. ಎಚ್ಚರಿಕೆಯಿಂದ ಮಾತನಾಡಿ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ಗೆ ಖಡಕ್ ಸೂಚನೆ ನೀಡಿದ್ದಾರೆ.
ಪಕ್ಷ ಇದ್ದರೆ ವ್ಯಕ್ತಿ, ಪಕ್ಷವೇ ಸೋತರೆ ಯಾರು ಏನು ಮಾಡಲು ಆಗಲ್ಲ. ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ ಎಂದು ಸಲಹೆ ನೀಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಥಿತಿ ಉತ್ತಮವಾಗಿದೆ. ಅನಗತ್ಯ ಹೇಳಿಕೆಗಳು ಬೇಡ. ತಮ್ಮ ವಿಭಿನ್ನ ಹೇಳಿಕೆಯಿಂದ ಪಕ್ಷದ ವರ್ಚಸ್ಸಿಗೆ ತೊಂದರೆಯಾದರೆ ಅದಕ್ಕೆ ನೀವೆ ಹೊಣೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.
ಅದೇ ರೀತಿ ಯಾರನ್ನೂ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಿದೆ.ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಿದೆ. ಸಭೆ ಬಳಿಕ ಹೈಕಮಾಂಡ್ ಹಲವು ವಿಚಾರಕ್ಕೆ ಬ್ರೇಕ್ ಹಾಕಿದೆ. ಯಾರನ್ನೂ ಕೂಡ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ,ಚುನಾವಣೆ ಬಳಿಕ ಸಿಎಂ ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇವೆ, ಅಲ್ಲಿವರೆಗೂ ಈ ಬಗ್ಗೆ ಚರ್ಚೆ ಬೇಡ ಎಂದು ಹೈಕಮಾಂಡ್ ತೆರೆ ಎಳೆದಿದೆ.
ಇನ್ನೂ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತ್ಯೇಕ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಸ್ ಯಾತ್ರೆ ಜೊತೆಗೇ ದಕ್ಷಿಣ ಕರ್ನಾಟಕದಲ್ಲಿ ಬsಸ್ ಯಾತ್ರೆಗೆ ಸಿದ್ಧತೆ ಕೈಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಬಸ್ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.