ನಿರುದ್ಯೋಗಿ ಹೆಣ್ಣುಮಕ್ಕಳಿಗೆ ಮಾಸಿಕ 2000 ರೂ. ನೀಡಲು ಕಾಂಗ್ರೆಸ್‌ ನಿರ್ಧಾರ

ನಿರುದ್ಯೋಗಿ ಹೆಣ್ಣುಮಕ್ಕಳಿಗೆ ಮಾಸಿಕ 2000 ರೂ. ನೀಡಲು ಕಾಂಗ್ರೆಸ್‌ ನಿರ್ಧಾರ

ನಿರುದ್ಯೋಗಿ ಹೆಣ್ಣುಮಕ್ಕಳಿಗೆ ಮಾಸಿಕ 2000 ರೂ. ನೀಡಲು ಕಾಂಗ್ರೆಸ್‌ ತೀರ್ಮಾನಿಸಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಮಾಸಿಕ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌‌‌‌‌ ನೀಡಿವುದಾಗಿ ಘೋಷಣೆ ಮಾಡಿರುವ ಕಾಂಗ್ರೆಸ್‌‌, ಇಂದು 2ನೇ ಭರವಸೆಯಾಗಿ ನಿರುದ್ಯೋಗಿ ಹೆಣ್ಣುಮಕ್ಕಳಿಗೆ ಮಾಸಿಕ 2000 ರೂ. ನೀಡುವುದಾಗಿ ಘೋಷಣೆ ಮಾಡಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ನಾ ನಾಯಕಿ ಮಹಿಳಾ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಈ ಘೋಷಣೆ ಮಾಡುವ ಸಾಧ್ಯತೆ ಇದೆ.