ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಚುನಾವಣಾ ನೀತಿ ಸಂಹಿತೆ ಇದ್ದರೂ ಓಲಗದವರಿಗೆ ಹಣ ಹಂಚಿದ ಹಿನ್ನಲೆಯಲ್ಲಿ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇಂದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಚುನಾವಣಾ ಆಯೋಗದಿಂದ ನಿನ್ನೆ ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಲಾಗಿತ್ತು. ನಿನ್ನೆಯಿಂದಲೇ ರಾಜ್ಯಾಧ್ಯಂತ ಮಾದರಿ ನೀತಿ ಸಂಹಿತೆ ಕೂಡ ಜಾರಿಯಾಗಿದೆ. ಈ ನಡುವೆಯೂ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ನಿನ್ನೆ, ಸಚಿವೆ ಶಶಿಕಲಾ ಜೊಲ್ಲೆಯವರು ಮಹಿಳೆಯರಿಗಾಗಿ ಹಳದಿ ಕುಂಕುಮ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದಂತ ಅವರು, ಕಾರ್ಯಕ್ರಮ ಮುಗಿದ ಬಳಿಕ ಮಹಿಳೆಯರಿಗೆ ಊಟ ಹಾಕಿಸಿದ್ದರು. ಅಲ್ಲದೇ ಬಿಜೆಪಿಯ ಬಾವುಟ ಕೂಡ ಬಳಸಿದ್ದರು. ಈ ಹಿನ್ನಲೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.

ವಿಜಯಪುರದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಲಕ್ಷ ನಗದು, ಚಿನ್ನಾಭರಣ ಜಪ್ತಿ

ವಿಜಯಪುರ : ವಿಜಯಪುರದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಲಕ್ಷ ನಗದು, 480 ಗ್ರಾಂ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆ ಚಡಚಣ ಪಟ್ಟಣದಲ್ಲಿ ಕಾರು ತಪಾಸಣೆ ನಡೆಸಿದ ಪೊಲೀಸರು ದಾಖಲೆ ಇಲ್ಲದೇ ಸಾಗಿಸುತ್ತಿದ್ದ 6 ಲಕ್ಷ ನಗದು, 480 ಗ್ರಾಂ ಚಿನ್ನವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಹಾರಾಷ್ಟ್ರದ ಸೊಲ್ಲಾಪುರದ ವಿಜಯ ಪಡೋಳಕರ ಎಂಬಾತನನ್ನು ಪೊಲೀರು ವಶಕ್ಕೆ ಪಡೆದುಕೊಂಡಿದ್ದಾರೆ. ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 125 ಕ್ವಿಂಟಾಲ್ 'ಅನ್ನಭಾಗ್ಯ' ಅಕ್ಕಿ ಜಪ್ತಿ

ಮಂಡ್ಯ : ಮಂಡ್ಯದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 125 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚಿಣ್ಯ ಚೆಕ್ ಪೋಸ್ಟ್ ನಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಕ್ಯಾಂಟರ್ ನಲ್ಲಿ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಸದ್ಯ ಲಾರಿ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನಾಗಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.