ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ: ರೈತರಿಂದ ರಾಜಭವನಕ್ಕೆ ಮುತ್ತಿಗೆ, ವಶಕ್ಕೆ ಪಡೆದ ಪೊಲೀಸರು

ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ: ರೈತರಿಂದ ರಾಜಭವನಕ್ಕೆ ಮುತ್ತಿಗೆ, ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದ ರೈತರು ಶನಿವಾರ ರಾಜಭವನ ಚಲೋ ನಡೆಸಿದ್ದಾರೆ.

ರಾಜಭವನಕ್ಕೆ ಮುತ್ತಿಗೆ ಹಾಕಿ ಸರ್ಕಾರದ ಗಮನ ಸೆಳೆಯುವ ಮೂಲಕ ಕೇಂದ್ರ ಸರ್ಕಾರ ನೂತನ ತಿದ್ದುಪಡಿ ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದು, ಸರ್ಕಾರ ಹಿಂತೆಗೆದುಕೊಳ್ಳುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ರಾಜಭವನ ಚಲೋ ಕೈಗೊಂಡು ಮೆರವಣಿಗೆ ಬಂದಿದ್ದ ರೈತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ತಡೆದು ವಶಕ್ಕೆ ಪಡೆದರು.

ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಯನ್ನು ಹಿಂತೆಗೆದುಕೊಳ್ಳುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾ ನಿರತ ರೈತರು ಪಟ್ಟು ಹಿಡಿದಿದ್ದಾರೆ.

ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸುವುದು ರಾಜಭವನ ಚಲೋದ ಅಜೆಂಡಾವಾಗಿದೆ.