ನೆಲಮಂಗಲ: ಅಂಗಡಿ ಶಟರ್ ಮುರಿದು ಕಳ್ಳತನ, ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ

ನೆಲಮಂಗಲ: ಅಂಗಡಿ ಶಟರ್ ಮುರಿದು ಕಳ್ಳತನ, ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ

ಬೆಂಗಳೂರು ; ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಅಂಗಡಿಯಲ್ಲಿ ಕಳ್ಳತನ ನಡೆದಿದೆ.

ನೆಲಮಂಗಲ(ಬೆಂಗಳೂರು ಗ್ರಾಮಾಂತರ): ತಾಲೂಕಿನ ದಾಬಸ್‌ಪೇಟೆಯಲ್ಲಿ ಮಧ್ಯರಾತ್ರಿ ಅಂಗಡಿಯ ಶಟರ್ ಮುರಿದು ಒಳನುಗ್ಗಿದ ಕಳ್ಳ, ನಗದು ದೋಚಿ ಪರಾರಿಯಾಗಿದ್ದಾನೆ.

ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ತನಿಖೆ ನಡೆಯುತ್ತಿದೆ.

ಕಬ್ಬಿಣದ ರಾಡ್ ಸಹಾಯದಿಂದ ಶಟರ್ ಮೀಟಿದ ಕಳ್ಳ ಒಳನುಗ್ಗಿದ್ದಾನೆ. ನಂತರ ಅಂಗಡಿಯಲ್ಲಿ ಹುಡುಕಾಡಿ ಗಲ್ಲಾ ಪೆಟ್ಟಿಗೆಯಲ್ಲಿದ್ದ ನಗದು ದೋಚಿದ್ದಾನೆ. ಮೆಡಿಕಲ್ ಶಾಪ್ ಸೇರಿದಂತೆ ಹಲವು ಅಂಗಡಿಗಳಲ್ಲಿ ಕೃತ್ಯ ಎಸಗಿದ ದೃಶ್ಯಗಳು ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.

ಇದನ್ನೂ