ನೇಕಾರರಿಗೆ 'ಸಿಎಂ ಬೊಮ್ಮಾಯಿ' ಗುಡ್ ನ್ಯೂಸ್ : ಪ್ರತ್ಯೇಕ ನಿಗಮ ಸ್ಥಾಪನೆ, 25 ಕಡೆ ಜವಳಿ ಪಾರ್ಕ್ ನಿರ್ಮಾಣ

ನೇಕಾರರಿಗೆ 'ಸಿಎಂ ಬೊಮ್ಮಾಯಿ' ಗುಡ್ ನ್ಯೂಸ್ : ಪ್ರತ್ಯೇಕ ನಿಗಮ ಸ್ಥಾಪನೆ, 25 ಕಡೆ ಜವಳಿ ಪಾರ್ಕ್ ನಿರ್ಮಾಣ

ಬಾಗಲಕೋಟೆ : ನೇಕಾರರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಸದ್ಯದಲ್ಲೇ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಸಾಲಹಟ್ಟಿಯ ಶ್ರೀ ಶಿವಲಿಂಗೇಶ್ವರ ಏತ ನೀರಾವರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ನೇಕಾರರಿಗೆ ಸದ್ಯದಲ್ಲೇ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಲಾಗುತ್ತದೆ, ರಾಜ್ಯದ 25 ಕಡೆ ಜವಳಿ ಪಾರ್ಕ್ ನಿರ್ಮಿಸಲಾಗುತ್ತದೆ, ರಬಕವಿ-ಬನಹಟ್ಟಿ ನಗರ ಪ್ರದೇಶಕ್ಕೆ ಮೊದಲ ಜವಳಿ ಪಾರ್ಕ್ ನೀಡಲಾಗುತ್ತದೆ ಎಂದು ಸಿಎಂ ಘೋಷಿಸಿದರು.

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಮಧ್ಯಂತರ ವರದಿ ತರಿಸಿಕೊಂಡು ಸರ್ಕಾರಿ ನೌಕರರಿಗೆ 7 ನೇ ವೇತನ ಆಯೋಗ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಸರ್ಕಾರಿ ನೌಕರರಿಗಾಗಿ 7ನೇ ವೇತನ ಆಯೋಗದ ವರದಿ ಜಾರಿಗೆ ಬದ್ಧವಾಗಿದ್ದು, 1 ತಿಂಗಳ ಒಳಗಾಗಿ ಆಯೋಗದಿಂದ ಮಧ್ಯಂತರ ವರದಿ ಪಡೆದು ಅನುಷ್ಠಾನಗೊಳಿ ಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಕೂಡಲೇ 7ನೇ ವೇತನ ಆಯೋಗ ವರದಿ ಜಾರಿ ಮಾಡದಿದ್ದರೆ ಹೋರಾಟ ನಡೆಸುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಎಚ್ಚರಿಕೆ ನೀಡಿದೆ. ಜತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಸೇರಿದಂತೆ ಹಲವು ಸದಸ್ಯರು ಬಜೆಟ್ ಮೇಲಿನ ಉತ್ತರದ ವೇಳೆಯೇ ವೇತನ ಆಯೋಗ ಜಾರಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದ್ದರು.

1 ಲಕ್ಷ ಜನ ಸರ್ಕಾರಿ ನೌಕರರ ಹುದ್ದೆ ಮುಂದಿನ ವರ್ಷ ಭರ್ತಿ ಮಾಡಲಾಗುತ್ತದೆ. ಅಗತ್ಯ ಸೇವೆ ನೋಡಿಕೊಂಡು ಶಿಕ್ಷಕರ, ಉಪನ್ಯಾಸ ಹುದ್ದೆಗಳ ಭರ್ತಿಗೆ ಕ್ರಮ ವಹಿಸುತ್ತೇವೆ. ಹಣಕಾಸು ಲಭ್ಯತೆ ನೋಡಿ ಪರಿಷತ್ ಸದಸ್ಯರ ಅನುದಾನ ಹೆಚ್ಚಳ ಪರಿಗಣಿಸಲಾಗುತ್ತದೆ. ಪ್ರಥಮ ಬಾರಿ ಅಧಿಕಾರದ ವಿಕೇಂದ್ರೀಕರಣದ ಜೊತೆಗೆ ಹಣಕಾಸಿನ ವಿಕೇಂದ್ರೀಕರಣ ಮಾಡಿದ್ದೇವೆ. ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚನೆ ಕುರಿತು ಮಧ್ಯಂತರ ವರದಿ ತರಿಸಿಕೊಂಡು ಅನುಷ್ಠಾನ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.