ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಶವ ಪತ್ತೆ : ಸಾವಿನ ಸುತ್ತ ಹನುಮಾನದ ಹುತ್ತ

ಬಂಟ್ವಾಳ : ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಪತ್ತೆಯಾಗಿದ್ದು, , ಹಲವು ಅನುಮಾನಗಳಿಗೆ ಕಾರಣವಾಗಿದೆ.
ಭಜರಂಗದಳ ಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್ ರಾಜೇಶ್ ಪೂಜಾರಿ (26)ಯವರ ಮೃತದೇಹ ಸಿಕ್ಕಿದೆ.
ಸದ್ಯ, ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.