ನೇರ ನೇಮಕಾತಿ, ಮುಂಬಡ್ತಿ ಪ್ರಕ್ರಿಯೆಗೆ ನೀಡಲಾಗಿದ್ದ ಸುತ್ತೋಲೆ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನೇರ ನೇಮಕಾತಿ & ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಭೆ ಆಯೋಜಿಸಿದಂತೆ ಸೂಚನೆ ನೀಡಲಾಗಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ನೇರ ನೇಮಕಾತಿ ಮತ್ತು ಮೀಸಲಾತಿ ಅನ್ವಯವಾಗುವ ವೃಂದಗಳಿಗೆ ನೀಡಲಾಗುವ ಮುಂಬಡ್ತಿ ಪ್ರಕ್ರಿಯೆಗೆ ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ಆಯೋಜಿಸದಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದ್ದು, ಸುತ್ತೋಲೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದೆ.