ನ್ಯಾಯಬೆಲೆ ಅಂಗಡಿಯವರನ್ನು ಕೊರೊನಾ ಮಂಚೂಣಿ ಯೋಧರೆಂದು ಪರಿಗಣಿಸಲು ಆಗ್ರಹ
ಬೆಳಗಾವಿ: ನ್ಯಾಯಬೆಲೆ ಅಂಗಡಿಯವರನ್ನು ಕೊರೊನಾ ಮುಂಚೂಣಿ ಯೋಧರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
'ಕೋವಿಡ್ ಕಾರಣದಿಂದ ಬಯೊಮೆಟ್ರಿಕ್ ವ್ಯವಸ್ಥೆ ರದ್ದುಗೊಳಿಸಿ ಮ್ಯಾನ್ಯುಯೆಲ್ ಅಥವಾ ಮೊಬೈಲ್ ಫೋನ್ ಒಟಿಪಿ ಸಂದೇಶ ಆಧರಿಸಿ ಪಡಿತರ ವಿತರಣೆಗೆ ಅವಕಾಶ ಕಲ್ಪಿಸಬೇಕು. ನ್ಯಾಯಬೆಲೆ ಅಂಗಡಿಗಳವರು ಹಾಗೂ ಅವರ ಕುಟುಂಬದವರಿಗೆ ಕೋವಿಡ್ ಲಸಿಕೆಯನ್ನು ಆದ್ಯತೆಯ ಮೇಲೆ ಕೊಡಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆ ಮೀಸಲಿಸಡಬೇಕು. ಕಮಿಷನ್ ಅನ್ನು ಸಕಾಲಕ್ಕೆ ಪಾವತಿಸಬೇಕು ಹಾಗೂ ವಿಶೇಷ ಪ್ಯಾಕೇಜ್‌ನಲ್ಲಿ ನಮ್ಮನ್ನೂ ಒಳಗೊಳಿಸಬೇಕು' ಎಂದು ಒತ್ತಾಯಿಸಿದರು.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಜಶೇಖರ ತಳವಾರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ ಚಂದ್ರಶೇಖರ ಬಾಗಡೆ ಇದ್ದರು.