ನ್ಯೂ ಇಯರ್ ದಿನ ಪ್ರವಾಸಿಗರಿಗೆ ಶಾಕ್; ನಂದಿಬೆಟ್ಟಕ್ಕೆ ನಿರ್ಬಂಧ, ಬಿಗಿ ಭದ್ರತೆ

ಬೆಂಗಳೂರು: ಇನ್ನೇನು ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. ಕಳೆದ ಎರಡು ವರ್ಷಗಳ ನಂತರ ಹೊಸ ವರ್ಷವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.
ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಕೂಡ ಫುಲ್ ಅಲರ್ಟ್ ಆಗಿದೆ. ಇದೀಗ ಹೊಸ ವರ್ಷಕ್ಕೆ ಹೊರಗೆ ಹೋಗುವುದಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಅದರಲ್ಲೂ ಹೆಚ್ಚಾಗಿ ಬೆಟ್ಟದ ಕಡೆ ಹೋಗಿ ಸಮಯ ಕಳೆಯುವುದಕ್ಕೆ ನೋಡುತ್ತಾರೆ. ಆದರೆ ಹೊಸ ವರ್ಷಾಚರಣೆಗೆ ನಂದಿಬೆಟ್ಟದಲ್ಲಿ ನಿರ್ಬಂಧ ಹೇರಲಾಗಿದೆ.ಡಿ.31ಸಂಜೆ 6 ಗಂಟೆಯಿಂದ ಜ.1 ಬೆಳಿಗ್ಗೆ 6 ಗಂಟೆವರೆಗೂ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ.