ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ದಿಢೀರ್ ರಾಜೀನಾಮೆ
ಬೆಂಗಳೂರು: ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪಕ್ಷದ ಸಭೆಯಲ್ಲಿ ಘೋಷಿಸಿದ್ದಾರೆ.
ದೊಡ್ಡ ಜವಾಬ್ದಾರಿ ಇರುವ ಉನ್ನತ ಹುದ್ದೆಯನ್ನು ನಿರ್ವಹಿಸಲು ನನಗೆ ಸಾಧ್ಯವಾಗುತ್ತಿಲ್ಲ.
ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುತ್ತಿಲ್ಲ ಎಂದು ಜಸಿಂಡಾ ಅವರು ದಿಢೀರ್ ನಿರ್ಧಾರ ಪ್ರಕಟಿಸಿದ್ದು, ಪಕ್ಷದಲ್ಲಿ ಅಚ್ಚರಿಗೆ ಕಾರಣವಾಗಿದೆ.
ಇದೊಂದು ದೊಡ್ಡ ಮತ್ತು ಅತ್ಯಂತ ಹೆಚ್ಚಿನ ಜವಾಬ್ದಾರಿಯುವ ಹುದ್ದೆಯಾಗಿದೆ. ಅದನ್ನು ನಿರ್ವಹಿಸುವುದು ಕೂಡ ಸುಲಭವಲ್ಲ. ಅಂತಹ ಹುದ್ದೆಗೆ ಸೂಕ್ತ ವ್ಯಕ್ತಿ ಇದ್ದರೆ ಚೆನ್ನ. ನನಗೆ ಪ್ರಧಾನಿ ಹುದ್ದೆ ನಿಭಾಯಿಸಲು, ಪದವಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಸಿಂಡಾ ಹೇಳಿಕೆ ನೀಡಿದ್ದಾರೆ.