ಪಠಾಣ್’ ಚಿತ್ರಕ್ಕೆ ಒಳ್ಳೆಯ ಪ್ರಚಾರ ಸಿಕ್ತು; ಸಿನಿಮಾ ಗೆಲ್ಲತ್ತೆ ಎಂದ ಶಾರುಖ್ ಖಾನ್
ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಇದೀಗ ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.