ಪಡಿತರ ಚೀಟಿದಾರರೇ ಗಮನಿಸಿ : ದುಡ್ಡಿಗೆ ಪಡಿತರ ಮಾರಿದರೆ ರೇಷನ್ ಕಾರ್ಡ್ ಅಮಾನತು!

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿಯೊದನ್ನು ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಸಿಗುವ ಆಹಾರ ಧಾನ್ಯಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಹಣಕ್ಕಾಗಿ ಮಾರಾಟ ಮಾಡಿದ್ರೆ 6 ತಿಂಗಳು ಕಾರ್ಡ್ ಅಮಾನತು ಆಗಲಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈ ಕುರಿತು ಆದೇಶ ಹೊರಡಿಸಿದ್ದು, ಅಕ್ರಮವಾಗಿ ಪಡಿತರ ಆಹಾರ ಧಾನ್ಯ ಮಾರಾಟಕ್ಕೆ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಅನ್ಯಭಾಗ್ಯ ಯೋಜನೆಯಡಿ ಸಿಗುವ ಆಹಾರ ಧಾನ್ಯಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಹಣಕ್ಕಾಗಿ ಮಾರಾಟ ಮಾಡುವ ಫಲಾನುಭವಿಗಳ ಪಡಿತರ ಚೀಟಿ ಆರು ತಿಂಗಳು ಅಮಾನತು ಆಗಲಿದೆ. ಜೊತೆಗೆ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುವುದು ಎಂದು ಆಹಾರ ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ.