ಕಾಮದ ಮದದಲ್ಲಿ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ
ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಯರಲಕಟ್ಟೆ ಗ್ರಾಮದಲ್ಲಿ ಮಹಿಳೆಯೊಬ್ಬಳು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ್ದು, ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮಣ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ನಂಬರ್ 28 ರಂದು ಜಗಳೂರು ತಾಲೂಕಿನ ಯರಲಕಟ್ಟೆಯಲ್ಲಿ ಲಕ್ಷ್ಮಣನ ಕೊಲೆಯಾಗಿದ್ದು, ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದಾಗ ಮೃತನ ತಾಯಿ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಸಿದ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದಿದ್ದಾರೆ.
ಲಕ್ಷ್ಮಣ ಕೆಲಸಕ್ಕೆ ಹೋಗುವಾಗ ಹನುಮಂತನೊಂದಿಗೆ ಲವ್ವಿಡವ್ವಿ ಶುರುಮಾಡಿದ್ದ ಮಹಿಳೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುವ ಕಾರಣಕ್ಕೆ ಗಂಡನನ್ನೇ ಕೊಲೆ ಮಾಡಿದ್ದಾರೆ ಎನ್ನುವುದು ಗೊತ್ತಾಗಿದೆ. ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ.