ಪದ್ಮವಿಭೂಷಣ ಎಸ್. ಎಂ ಕೃಷ್ಣ ಸನ್ಮಾನಿಸಿದ ಸಿಎಂ ಬೊಮ್ಮಾಯಿ

ಪದ್ಮವಿಭೂಷಣ ಎಸ್. ಎಂ ಕೃಷ್ಣ ಸನ್ಮಾನಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಇಂದು ಬೆಳಗ್ಗೆ ಸಿಎಂ ಸದಾಶಿವನಗರದಲ್ಲಿನ ನಿವಾಸದಲ್ಲಿರುವ ಎಸ್.

ಎಂ. ಕೃಷ್ಣರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್ ಮತ್ತಿತರಿದ್ದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ' ಎಸ್. ಎಂ. ಕೃಷ್ಣ ಕರ್ನಾಟಕದ ಹೆಮ್ಮೆ, ನಾಡು ಕಂಡ ಸೃಜನಶೀಲ ಸರಳ ಸಜ್ಜನಿಕೆಯ ರಾಜಕಾರಣಿ ಎಂದು ಬಣ್ಣಿಸಿದರು.

ಈ ಕುರಿತು ಎಸ್ ಎಂ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿಯವರಿಗೆ ಹಾಗೂ ಗೃಹ ಸಚಿವರಿಗೆ ಋಣಿಯಾಗಿದ್ದೇನೆ, ನನಗೆ ಬಹಳ ಸಂತೋಷವಾಗಿದೆ, ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯವಾಗಿದೆ. ಪದ್ಮ ವಿಭೂಷಣ ಘೋಷಣೆಯಾಗಿರುವುದಕ್ಕೆ ಬಹಳ ಸಂತೋಷ ಆಗಿದೆ. . ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.