ಪರಮೇಶ್ವರ್ ಜಾಣ ನಡೆ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ

ಪರಮೇಶ್ವರ್ ಜಾಣ ನಡೆ: ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್ ನಿಂದ ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನಿವಾಸದಲ್ಲಿ ನಿನ್ನೆ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿರುವ ಸತೀಶ ಜಾರಕಿಹೊಳಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಡಾ.ಜಿ.

ಪರಮೇಶ್ವರ್, ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಐಕ್ಯತಾ ಸಮಾವೇಶದ ನೆಪದಲ್ಲಿ ಪರಮೇಶ್ವರ್ ಜಾಣ ನಡೆ ಅನುಸರಿಸಿದ್ದಾರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸತೀಶ ಜಾರಕಿಹೊಳಿ ನಿವಾಸದಲ್ಲಿ ಸಭೆ ನಿಗದಿ ಮಾಡಲಾಗಿದೆ.

ಕಾಂಗ್ರೆಸ್ ಸಭೆಯಿಂದ ಸತೀಶ್ ಜಾರಕಿಹೊಳಿ ದೂರ ಉಳಿಯುತ್ತಿದ್ದರು. ಕಳೆದ ವಾರ ನಡೆದ ಸಭೆಗೂ ಅವರು ಗೈರು ಹಾಜರಾಗಿದ್ದರು. ಸತೀಶ್ ಅವರಿಗೆ ಕರೆ ಮಾಡಿ ಸಭೆ ನಡೆಸಲು ಪರಮೇಶ್ವರ್ ಕೋರಿದ್ದು, ಅವರ ಸಲಹೆ ಮೇರೆಗೆ ಸತೀಶ್ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗಿದೆ ಎಂದು ಹೇಳಲಾಗಿದೆ