
ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆಯಲ್ಲಿ 15 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಪರಿಷತ್ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ ೧೫ ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಬಿಜೆಪಿ ಸಂಘಟನೆಯಿಂದ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ ಎಂದರು.
ಪ್ರದೀಪ್ ಶೆಟ್ಟರ್ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ. ದೇಶದೆಲ್ಲೆಡೆ ಬಿಜೆಪಿ ಪರ ಅಲೆಯಿದೆ. ಉತ್ತರಪ್ರದೇಶ. ಉತ್ತರಖಾಂಡದಲ್ಲಿ ನಮ್ಮ ಪರ ಅಲೆಯಿದೆ. ಪಂಜಾಬನಲ್ಲಿ ಹೊಸ ಪ್ರಯೋಗ ಮಾಡುತ್ತಿದ್ದೇವೆ. ಬಿಜೆಪಿ ಮತ್ತೊಮ್ಮೆ ಪಾರುಪತ್ಯ ಸಾಧಿಸಲಿದೆ ಎಂದರು.
ಪರಿಷತ್ ಚುನಾವಣೆಯಲ್ಲಿ ಹಣ ಹಂಚಿಕೆ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಗಂಭೀರವಾದ ಚಿಂತನೆ ಅಗಬೇಕಿದೆ. ಹಣ ಹಂಚಿಕೆ ಇದೇ ರೀತಿ ಮುಂದುವರಿದರೆ ಪರಿಷತ್ ಬೇಕೋ ಬೇಡ್ವೋ ಅನ್ನುವ ಚರ್ಚೆ ಆಗಬೇಕಾಗುತ್ತದೆ. ಎಲ್ಲ ಪಕ್ಷಗಳು ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ.
ಹಣ ಹಂಚಿಕೆ ಆರೋಪ ದೊಡ್ಡ ಪ್ರಮಾಣದಲ್ಲಿ ಕೇಳಿ ಬಂದಿದೆ.ವಿಧಾನಪರಿಷತ್ ಬೇಡ ಬೇಕೋ ಅನ್ನೋ ಬಗ್ಗೆ ಎಲ್ಲ ಪಕ್ಷಗಳು ಚಿಂತನೆ ಮಾಡಬೇಕಿದೆ. ಇದೊಂದು ಗಂಭೀರವಾದ ವಿಷಯವಾಗಿದೆ. ಲಂಚ ಕೊಟ್ಟು ಆರಿಸಿ ಬರುತ್ತಿದ್ದಾರೆ. ಎಲ್ಲ ಪಕ್ಷಗಳ ಪ್ರಮುಖರು. ಸಿಎಂ ಈ ಬಗ್ಗೆ ಗಂಭೀರ ಚಿಂತನೆ ಮಾಡಬೇಕಿದೆ ಎಂದರು.
ಸಾರ್ವತ್ರಿಕ ಚುನಾವಣೆಗಿಂತ ಪರಿಷತ್ ಚುನಾವಣೆಯಲ್ಲಿ ಹೆಚ್ಚು ಖರ್ಚು ಅಗುತ್ತಿದೆ. ಹಣ ತಗೆದುಕೊಂಡು ಮತ ಹಾಕಿದ ಮೇಲೆ ಕೆಲಸ ಮಾಡಕೊಡಲು ಆಗುವುದಿಲ್ಲ ಎಂದ ಅವರು, ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಕರ್ನಾಟಕ ಗೋವಾ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿವೆ. ಕರ್ನಾಟಕ ಎಲ್ಲ ರೀತಿಯ ಸಿದ್ದತೆಯಲ್ಲಿದೆ. ಕಾಮಗಾರಿ ಆರಂಭಿಸಲು ಹಣ ಸಹ ತಗೆದಿರಿಸಲಾಗಿದೆ ಎಂದರು.