ಪರಿಶಿಷ್ಟ ಜಾತಿಗೆ 'ಮಡಿವಾಳ' ಸಮುದಾಯ ಸೇರ್ಪಡೆ : ಸಿಎಂ ಬೊಮ್ಮಾಯಿ ಘೋಷಣೆ
ಚಿತ್ರದುರ್ಗ : ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಮಡಿವಾಳ ಮಠದ 14 ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಇತರೆ ಸಮುದಾಯಗಳಿಗೆ ಅನ್ಯಾಯವಾಗದಂತೆ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ.ಈ ಬೇಡಿಕೆಯನ್ನು ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಇದೇ ವೇಳೆ ಮಾಜಿ ಸಿಎಂ ಬಿ,ಎಸ್ ಯಡಿಯೂರಪ್ಪಗೆ ಮಾಚಿದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಂವಿಧಾನದ ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ. ಈ ಬಗ್ಗೆ ಗಮನ ಹರಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ನಾಲ್ಕು ನಗರಗಳಲ್ಲಿ ರಿಂಗ್ ರಸ್ತೆ
ರಾಯಚೂರು, ಕೊಪ್ಪಳ, ಗದಗ, ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಇದೇ ವರ್ಷದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.