ಪರಿಷತ್ ಉಪ ಸಭಾಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಾಣೇಶ್

ಪರಿಷತ್ ಉಪ ಸಭಾಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿಯ ಪ್ರಾಣೇಶ್

ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ ಹಿನ್ನಲೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಚಿವರಾದ ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ, ಜೆ.ಸಿ.ಮಾಧುಸ್ವಾಮಿ ಹಾಗೂ ಭಾರತಿ ಶೆಟ್ಟಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತಿತರರೊಂದಿಗೆ ಆಗಮಿಸಿ ಪರಿಷತ್ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು. ಪರಿಷತ್ ಉಪ ಸಭಾಪತಿ ಚುನಾವಣೆ ನಾಳೆ ನಡೆಯಲಿದೆ.