Karnataka MLC Elections 2021 Voting: ಪರಿಷತ್ ಫೈಟ್ ಮತದಾನ

ಬೆಂಗಳೂರು, ಡಿಸೆಂಬರ್ 10; ಕರ್ನಾಟಕದ 20 ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಶುಕ್ರವಾರ ಮತದಾನ ನಡೆಯುತ್ತಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ತನಕಮತದಾನಮಾಡಲು ಅವಕಾಶವಿದೆ.
ಮತದಾನಕ್ಕಾಗಿ ಒಟ್ಟು 6072 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. 23,065 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಸದಸ್ಯರೇ ಮತದಾರರರು. 90 ಅಭ್ಯರ್ಥಿಗಳ ಪೈಕಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಾತ್ರ ಒಬ್ಬರು ಮಹಿಳಾ ಅಭ್ಯರ್ಥಿ ಕಣದಲ್ಲಿದ್ದಾರೆ. ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಬಳಕೆ ಮಾಡುತ್ತಿಲ್ಲ. ಮತಪತ್ರಗಳಲ್ಲಿ ಮತದಾನವನ್ನು ಮಾಡಬೇಕಿದೆ.