ಪರೀಕ್ಷಾ ಕೊಠಡಿಗಳಲ್ಲಿ ಬುರ್ಖಾ ನಿಷೇಧಿಸಿದ ಸೌದಿ ಅರೇಬಿಯಾ

ಪರೀಕ್ಷಾ ಕೊಠಡಿಗಳಲ್ಲಿ ಬುರ್ಖಾ ನಿಷೇಧಿಸಿದ ಸೌದಿ ಅರೇಬಿಯಾ

ಪರೀಕ್ಷಾ ಕೋಠಡಿಗಳಲ್ಲಿ ಹೆಣ್ಣು ಮಕ್ಕಳು ಅಬಯಾ (ಬುರ್ಖಾ ಮಾದರಿಯ ನಿಲುವಂಗಿ) ವಸ್ತ್ರ ಧರಿಸುವುದಕ್ಕೆ ಸೌದಿ ಅರೇಬಿಯಾ ನಿಷೇಧ ಹೇರಿದೆ ಎಂದು ಗಲ್ಫ್ ನ್ಯೂಸ್ ವರದಿ ಮಾಡಿದೆ. ಪರೀಕ್ಷಾ ಕೊಠಡಿಗಳಲ್ಲಿ ಅಬಯಾ ಧರಿಸುವಂತಿಲ್ಲ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲಾ ಸಮವಸ್ತ್ರ ಧರಿಸಬೇಕು. ನಿಯಮಾವಳಿಗಳಿಗೆ ಬದ್ಧವಾಗಿರಬೇಕು ಎಂದು ಸೌದಿಯ ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಶಿಕ್ಷಣ ಹಾಗೂ ತರಬೇತಿ ಮೌಲ್ಯಮಾಪನ ಆಯೋಗ ಆದೇಶ ಹೊರಡಿಸಿದೆ.