ಪರೀಕ್ಷೆಗೆ ಹಾಜರಾಲು ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತೆ ಕೋರ್ಟ್ ಮೊರೆ

ನವದೆಹಲಿ : ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಪರೀಕ್ಷೆ ಬರೆಯಲು ಮಧ್ಯಂತರ ಪರಿಹಾರ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಮಾರ್ಚ್ 9 ರ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಾಗುವಂತೆ ವಿದ್ಯಾರ್ಥಿಗಳು ಪರಿಹಾರವನ್ನು ಕೋರುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪರ ವಕೀನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಜನವರಿ 2022 ರಲ್ಲಿ, ಕರ್ನಾಟಕದ ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪ್ರತಿಭಟನೆ ಆರಂಭಿಸಿದ್ದರು. ನಂತರ ಈ ಪ್ರತಿಭಟನೆ ದೇಶವ್ಯಾಪಿ ಹರಡಿತ್ತು. ಇದಾದ ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿದ್ದು, ಕಳೆದ ವರ್ಷ ಮಾರ್ಚ್ನಲ್ಲಿ ಕರ್ನಾಟಕ ಹೈಕೋರ್ಟ್ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿತ್ತುತರಗತಿಯಲ್ಲಿ ಅವಕಾಶವಿಲ್ಲ ಎಂದು ಹೇಳಿತ್ತು.
ನಂತರ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳನ್ನು ವಜಾಗೊಳಿಸಿದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವುಗಳನ್ನು ಅನುಮತಿಸಿದ್ದರು. ಹೀಗಾಗಿ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸುವ ಈ ಅರ್ಜಿಗಳನ್ನು ಸೂಕ್ತ ದೊಡ್ಡ ಪೀಠದ ರಚನೆಗಾಗಿ ಮುಖ್ಯ ನ್ಯಾಯಾಧೀಶರ ಮುಂದೆ ಇಡುವಂತೆ ಸೂಚಿಸಲಾಗಿತ್ತು.