ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಪಡೆ

ಅಮೃತಸರ: ಪಂಜಾಬ್ನ ಅಮೃತಸರ ಜಿಲ್ಲೆಯಲ್ಲಿ ಪಾಕಿಸ್ತಾನದಿಂದ ಭಾರತದ ಕಡೆ ನುಸುಳಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ. ನಗರದ ಉತ್ತರಕ್ಕೆ 40 ಕಿ.ಮೀ. ದೂರದಲ್ಲಿರುವ ಚಹರ್ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸುವುದನ್ನು ಗಮನಿಸಿದ BSF ಸಿಬ್ಬಂದಿ ಡ್ರೋನ್ ಮೇಲೆ ಗುಂಡು ಹಾರಿಸಿದ್ದಾರೆ. ಬಳಿಕ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಬಿಎಸ್ಎಫ್ ಭಾಗಶಃ ಹಾನಿಗೊಳಗಾದ ಹೆಕ್ಸಾಕಾಪ್ಟರ್ ಅನ್ನು ವಶಪಡಿಸಿಕೊಂಡಿದೆ.