ಪಾಕಿಸ್ತಾನದಲ್ಲಿ ಅಗ್ನಿ ಅನಾಹುತ: 10 ಮಂದಿ ಸಾವು

ಪಾಕಿಸ್ತಾನದಲ್ಲಿ ಅಗ್ನಿ ಅನಾಹುತ: 10 ಮಂದಿ ಸಾವು

ಪೆಶಾವರ: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದ ಪರ್ವತ ಜಿಲ್ಲೆಯಲ್ಲಿ ಬೆಂಕಿ ಹೊತ್ತಿಕೊಂಡು ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಕನಿಷ್ಠ 10 ಜನ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ.

ದುರ್ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೃತರು ಮತ್ತು ಗಾಯಗೊಂಡವರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಮೂವರನ್ನು ರಕ್ಷಿಸಲಾಗಿದೆ. ಗಾಯಾಳುಗಳು ಹಾಗೂ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.