ಪಾಕ್‌ ವಿದೇಶಾಂಗ ಸಚಿವರ ಹೇಳಿಕೆ ಖಂಡಿಸಿ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ

ಪಾಕ್‌ ವಿದೇಶಾಂಗ ಸಚಿವರ ಹೇಳಿಕೆ ಖಂಡಿಸಿ ಕರ್ನಾಟಕದಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರು ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿದ ಹಿನ್ನೆಲೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕುಕ್ಕರ್‌‌ ಬಾಂಬ್‌ ಸ್ಪೋಟದ ಆರೋಪಿ ಶಾರಿಕ್‌‌‌ ಬಗ್ಗೆ ಮೃದು ಹೇಳಿಕೆ ಕೊಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌‌ ವಿರುದ್ದವೂ ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.