ಪಾದಯಾತ್ರೆ ಕೈ ಬಿಟ್ಟು ಚರ್ಚೆಗೆ ಬನ್ನಿ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟು, ಸರ್ಕಾರದ ಜೊತೆ ಚರ್ಚೆಗೆ ಬರಲಿ ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು.
ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.
ಕಾಂಗ್ರೆಸ್ ಮುಖಂಡರಿಗೆ ಸಮಾಜ ಹಾಗೂ ಜನಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿಯಿದ್ದರೆ ಪಾದಯಾತ್ರೆ ಮಾಡುತ್ತಿರಲಿಲ್ಲ. ಪ್ರತಿಷ್ಠೆಯ ಪ್ರಶ್ನೆ ಎನ್ನುತ್ತ ಹಠಮಾರಿ ಧೋರಣೆಯಿಂದ ಈ ರೀತಿ ವರ್ತಿಸುತ್ತಿದ್ದಾರೆ. ಅವರ ಪಾದಯಾತ್ರೆಯಿಂದ ಸೋಂಕು ಹೆಚ್ಚಳವಾಗಲಿದೆ. ಇದೆಲ್ಲ ಅವರಿಗೆ ಯಾಕೆ ಅರ್ಥವಾಗುತ್ತಿಲ್ಲ ಎಂದು ಶೆಟ್ಟರ್ ಪ್ರಶ್ನಿಸಿದರು.