ಪಿಯುಸಿ’ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ

ಮಕ್ಕಳ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. 2023-24ರ ಸಾಲಿನಿಂದ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪರಿಚಯಿಸಲು ಮುಂದಾಗಿದ್ದು, ದ್ವಿತೀಯ ಪಿಯುಸಿ ಮಾತ್ರವಲ್ಲದೇ, ಪ್ರಥಮ ಪಿಯುಸಿಗೂ ಈ ಮಾದರಿ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಶಾಲಾ ಶಿಕ್ಷಣ & ಸಾಕ್ಷರತಾ ಸಚಿವ ಬಿಸಿ ನಾಗೇಶ್ ನೇತೃತ್ವದ ಪಿಯು ಇಲಾಖೆ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದೆ.