ಪಾಕ್‌ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ಪೆಟ್ರೋಲ್ ಬಂಕ್‌ಗಳಲ್ಲಿ ಗಂಟೆಗಟ್ಟಲೆ ಕ್ಯೂ ನಿಂತ ಗ್ರಾಹಕರು

ಪಾಕ್‌ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ : ಪೆಟ್ರೋಲ್ ಬಂಕ್‌ಗಳಲ್ಲಿ ಗಂಟೆಗಟ್ಟಲೆ ಕ್ಯೂ ನಿಂತ ಗ್ರಾಹಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಗ್ರಾಹಕರು ಪೆಟ್ರೋಲ್ ತುಂಬಿಸಿಕೊಳ್ಳಲು ಮುಗಿಬಿದ್ದಿದ್ದಾರೆ. ಪಾಕ್‌ನ ಹಲವು ಭಾಗಗಳಲ್ಲಿ ಗ್ರಾಹಕರು ಪೆಟ್ರೋಲ್ ಬಂಕ್‌ಗಳ ಮುಂದೆ ಗಂಟೆಗಟ್ಟಲೆ ಕ್ಯೂ ನಿಂತು ಪೆಟ್ರೋಲ್, ಡೀಸೆಲ್ ಹಾಕಿಸಿಕೊಂಡಿದ್ದಾರೆ.

ಆರ್ಥಿಕ ಸಂಕಷ್ಟದಿಂದ ಹೈರಾಣಾಗಿರುವ ದೇಶಕ್ಕೆ ಈಗಾಗಲೇ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಈ ಮಧ್ಯೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 35 ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿದೆ.

ಪಾಕ್‌ನಲ್ಲಿ ಸದ್ಯ ಪೆಟ್ರೋಲ್ ಬೆಲೆ ಲೀಟರ್‌ಗೆ 249.80 ರೂ. ಹೈಸ್ಪೀಡ್ ಡೀಸೆಲ್ ದರ 262.80 ರೂಪಾಯಿಗಳಾಗಿವೆ. ಬೆಲೆ ಏರಿಕೆ ಘೋಷಣೆಯಾದ ತಕ್ಷಣ ವಾಹನ ಸವಾರರು ಫುಲ್ ಟ್ಯಾಂಕ್ ಮಾಡಿಸಿಕೊಂಡಿದ್ದು, ದೊಡ್ಡ ಕ್ಯಾನ್‌ಗಳ ಜತೆ ಪೆಟ್ರೋಲ್ ಬಂಕ್‌ನಲ್ಲಿ ಕ್ಯೂ ಇರುವುದು ಕಾಣಿಸಿತ್ತು.

ಪಾಕ್ ಸರ್ಕಾರ ಈಗಾಗಲೇ ಸರ್ಕಾರಿ ನೌಕರರ ವೇತನ ಕಡಿತ, ಸಬ್ಸಿಡಿ ರದ್ದು ಹಾಗೂ ವಿದ್ಯುತ್ ಉಳಿತಾಯದಂತಹ ಅನೇಕ ಕ್ರಮಗಳನ್ನು ಕೈಗೊಂಡಿದೆ. ಈ ಮಧ್ಯೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಸಾರ್ವಜನಿಕರಿಗೆ ಆಘಾತವನ್ನುಂಟುಮಾಡಿದೆ.