ಪೆಟ್ರೋಲ್ ಹಾಕಿ ಪ್ರೇಯಸಿಯ ಸ್ಕೂಟರ್‌ಗೆ ಬೆಂಕಿ ಹಚ್ಚಿದ ಪ್ರಿಯಕರ

ಬೆಂಗಳೂರಿನಲ್ಲಿ 25 ವರ್ಷದ ಯುವಕನೊಬ್ಬ ತನ್ನ ಪ್ರೇಯಸಿಯ ಸ್ಕೂಟರ್‌ಗೆ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಈ ಹಿಂದೆ ಮಾದಕ ದ್ರವ್ಯ ದಂಧೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಆತನ ಪ್ರೇಯಸಿಯನ್ನು ವಿಚಾರಣೆಗೊಳಪಡಿಸಲಾಗಿತ್ತು. ಅಂದಿನಿಂದ, ಅವಳು ಅವನನ್ನು ತಪ್ಪಿಸಿ ಓಡಾಡುತ್ತಿದ್ದಳು. ಈ ಕಾರಣಕ್ಕೆ ಯುವತಿ ತನ್ನ ಕಟ್ಟಡದ ನೆಲಮಾಳಿಗೆಯಲ್ಲಿ ನಿಲ್ಲಿಸಿದ್ದ ವಾಹನಕ್ಕೆ, ಆರೋಪಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.