ಪೊಲೀಸ್ ಸರ್ಪಗಾವಲಿನಲ್ಲಿ ಇಂದು 3 ಗೋರಿ ತೆರವು ಕಾರ್ಯಾಚರಣೆ

ಪೊಲೀಸ್ ಸರ್ಪಗಾವಲಿನಲ್ಲಿ ಇಂದು 3 ಗೋರಿ ತೆರವು ಕಾರ್ಯಾಚರಣೆ

ಹುಬ್ಬಳ್ಖಿ : ಹುಬ್ಬಳ್ಳಿಯಲ್ಲಿ ಇಂದು ಸತತ 12 ಗಂಟೆಯಿಂದ ದರ್ಗಾ ತೆರವು ಕಾರ್ಯಾಚರಣೆ ನಡೆದಿದ್ದು, ಇಂದು 3 ಗೋರಿಗಳ ತೆರವು ಕಾರ್ಯ ನಡೆದಿದೆ.

ವಿಶೇಷ ಯಂತ್ರೋಪಕರಣಗಳ ಮೂಲಕ ಗೋರಿಗೆ ಧಕ್ಕೆ ಆಗದಂತೆ ದರ್ಗಾ ತೆರವು ಕಾರ್ಯಾಚರಣೆ ನಡೆಸಲಾಗಿದೆ.

ಇಂದು ತಡರಾತ್ರಿವರೆಗೂ ಕಾರ್ಯಾಚರಣೆ ನಡೆಯಲಿದ್ದು, ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರೋ ಹಜರತ್ ಸೈಯದ್ ಮಹಮೂದ್ ಖಾದ್ರಿ ದರ್ಗಾ ತೆರವುಗೊಳಿಸಲಾಗುತ್ತಿದೆ. ಹುಬ್ಬಳ್ಳಿ - ಧಾರವಾಡ ಸಂಪರ್ಕ ಕಲ್ಪಿಸೋ ಮುಖ್ಯ ರಸ್ತೆಯ ಪಕ್ಕದಲ್ಲೇ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ಇದೆ.

ಹುಬ್ಬಳ್ಳಿ ರಸ್ತೆ ಅಗಲೀಕರಣದಿಂದ ನನ್ನ ಜಾಗ ಕೂಡ ಹೋಗಿದೆ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿಯಲ್ಲಿ ರಸ್ತೆ ಅಗಲೀಕರಣದಿಂದ ನನ್ನ ಜಾಗ ಕೂಡ ಹೋಗಿದ್ದು, ನನಗೆ 5 ಲಕ್ಷ ಮಾತ್ರ ಪರಿಹಾರ ಸಿಕ್ಕಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ವಿಧಾನಸಭೆಯಲ್ಲಿ ಇಂದು ನಡೆದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ದರ್ಗಾ ತೆರವು ವಿಚಾರದ ಕುರಿತು ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ದರ್ಗಾ ಒಡೆಯುವ ವಿಚಾರದಲ್ಲಿ ಯಾರ ಭಾವನೆಗಳಿಗೆ ಧಕ್ಕೆ ತರಲ್ಲ. ಕೋರ್ಟ್ ಆದೇಶದಂತೆ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ ರಸ್ತೆ ಅಗಲೀಕರಣದಿಂದ ನನ್ನ ಜಾಗ ಕೂಡ ಹೋಗಿದ್ದು, ನನಗೆ 5 ಲಕ್ಷ ಮಾತ್ರ ಪರಿಹಾರ ಸಿಕ್ಕಿದೆ ಎಂದರು.

ಹುಬ್ಬಳ್ಳಿ - ಧಾರವಾಡ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಪಕ್ಕದಲ್ಲೇ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ಇದ್ದು, ರಸ್ತೆಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ ನಿರ್ಧರಿಸಿತ್ತು. ಜಿಲ್ಲೆಯ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ಇಂದು ಜಿಲ್ಲಾಡಳಿತ ತೆರವು ಮಾಡಿದೆ. ಜಿಲ್ಲಾಡಳಿತದ ನಡೆಗೆ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.