ಪೋಷಕರ ಯೋಗ ಕ್ಷೇಮ ನೋಡಿಕೊಳ್ಳದ ಮಗಳಿಗೆ ಬಿಗ್ ಶಾಕ್: ಆಸ್ತಿ ವಾಪಸ್
ಮಡಿಕೇರಿ: ತಂದೆ ತಾಯಿಯರ ಯೋಗ ಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ.
ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್.ಜಾನಕಿ ತಮ್ಮ ಹೆಸರಿನಲ್ಲಿ 0.15 ಎಕ್ರೆ ಆಸ್ತಿಯನ್ನು ಹೊಂದಿದ್ದರು.
ಆ ನಿಟ್ಟಿನಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ಅರ್ಜಿಯನ್ನು ಉಪ ವಿಭಾಗಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ಉಪವಿಭಾಗಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ 2007ರ ಅಡಿ ದಾನಪತ್ರ ರದ್ದುಗೊಳಿಸಿ ಅಸ್ತಿಯನ್ನು ಬಿ.ಎಸ್. ಜಾನಕಿ ಅವರ ಹೆಸರಿಗೆ ವರ್ಗಾಯಿಸುವಂತೆ ಆದೇಶ ನೀಡಿರುತ್ತಾರೆ.