ಪ್ರತಿಭಟನೆ ವೇಳೆ ಅನಾರೋಗ್ಯಕ್ಕೀಡಾಗಿದ್ದ ಶಿವಮೊಗ್ಗ ಮೂಲದ 'ಅಂಗನವಾಡಿ ಕಾರ್ಯಕರ್ತೆ' ನಿಧನ

ಪ್ರತಿಭಟನೆ ವೇಳೆ ಅನಾರೋಗ್ಯಕ್ಕೀಡಾಗಿದ್ದ ಶಿವಮೊಗ್ಗ ಮೂಲದ 'ಅಂಗನವಾಡಿ ಕಾರ್ಯಕರ್ತೆ' ನಿಧನ

ಶಿವಮೊಗ್ಗ : ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಇಡುಕ್ಕಿನ ಹೊಸಕೊಪ್ಪದ ನೀಲಮ್ಮ ದಾನಪ್ಪ ಗೌಡ ( 58) ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ನೀಲಮ್ಮ ಭಾಗಿಯಾಗಿದ್ದರು, ನಂತರ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದು, ಊರಿಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತೆ ಅಂಗನವಾಡಿ ನೌಕರರು ಪ್ರತಿಭಟನೆಗೆ ಇಳಿದಿದ್ದು, ಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.