ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಸೇರಿ ಹಲವು ಹೋರಾಟಗಾರರು ಪೊಲೀಸ್ ವಶಕ್ಕೆ

ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಸೇರಿ ಹಲವು ಹೋರಾಟಗಾರರು ಪೊಲೀಸ್ ವಶಕ್ಕೆ

ಬೆಳಗಾವಿ : ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾದ ಕನ್ನಡ ಪರ ಹೋರಾಟಗಾರ ವಾಟಾಳ್​​ ನಾಗರಾಜ್ ಸೇರಿ ಹಲವು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯದಲ್ಲಿ ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್​​ಗೆ ಬೆಂಬಲಿಸುವಂತೆ ಕೋರಲು ವಾಟಾಳ್​ ನಾಗರಾಜ್​​ ಬೆಳಗಾವಿಗೆ ಬಂದಿದ್ದರು.

ಈ ವೇಳೆ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಹೀಗಾಗಿ ಪೊಲೀಸರು ವಾಟಾಳ್ ನಾಗರಾಜ್ ಸೇರಿದಂತೆ 15 ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.