ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ
ಹಾವೇರಿ: ಪ್ರಥಮ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ.
ವಿನಾಯಕ ತಳವಾರ (17) ಮೃತ ವಿದ್ಯಾರ್ಥಿ.ಈತ ಮೃತ ಹಾವೇರಿ ನಗರದ ಹೊಸಮಠ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದ.
ಈ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.