ಪ್ರದೀಪ್ ಆತ್ಮಹತ್ಯೆ ಕೇಸ್ : ಶಾಸಕ ಅರವಿಂದ ಲಿಂಬಾವಳಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ನಿವಾಸಕ್ಕೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ನಗರದ ಮಹದೇವಪುರದ ಅಂಬಲಿಪುರದಲ್ಲಿರುವ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ತಾವು ನಂಬಿದ್ದ ಸ್ನೇಹಿತರಿಂದ ಹಣಕಾಸಿನ ವಿಚಾರದಲ್ಲಿ ಮೋಸಹೋಗಿ ಹಣಕಳೆದುಕೊಂಡು ಹತಾಷರಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಪ್ರದೀಪ್ ಅವರು ತಮ್ಮ ಡೆತ್ ನೋಟ್ ನಲ್ಲಿ ಮಾಜಿ ಶಾಸಕ ಮತ್ತು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಬೇಕು ಮತ್ತು ಪ್ರದೀಪ್ ಅವರ ಪತ್ನಿಗೆ ಹಣ ವಾಪಸ್ಸು ಕೊಡಿಸಬೇಕು ಎಂದು ಹೇಳಿದ್ದಾರೆ.