ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ: ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ನಗರಕ್ಕೆ ಆಗಮಿಸಲಿದ್ದು, ಅವರ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕಾಗಿ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ.
'ವಿಧಾನಸೌಧ, ರೈಲು ನಿಲ್ದಾಣ ಹಾಗೂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಕ್ರಮಗಳಲ್ಲಿ ಪ್ರಧಾನ ಮಂತ್ರಿ ಪಾಲ್ಗೊಳ್ಳಲಿದ್ದಾರೆ.
'ಬೆಳಿಗ್ಗೆ 7ರಿಂದ ಮಧ್ಯಾಹ್ನ 3 ಗಂಟೆವರೆಗೆ ನಗರದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಹಲವೆಡೆ ದಟ್ಟಣೆ ಉಂಟಾಗುವ ಸಾಧ್ಯತೆಯೂ ಇದೆ' ಎಂದಿದ್ದಾರೆ.