ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್!

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಖಾತೆ ಹ್ಯಾಕ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಕ್ತಿಕ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ನಿನ್ನೆ ರಾತ್ರಿ ಪ್ರಧಾನಿ ಮೋದಿ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿದೆ.

ಹೌದು ನಿನ್ನೆ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ ಬಿಟ್ ಕಾಯಿನ್ ಸಂಬಂಧ ಟ್ವೀಟ್ ಮಾಡಲಾಗಿತ್ತು.ಕೂಡಲೇ ಎಚ್ಚೆತ್ತ ಟ್ವಿಟರ್ ಸಂಸ್ಥೆ ಟ್ವಿಟರ್ ಖಾತೆ ಸರಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟರ್ ಖಾತೆಯಿಂದ ಈ ಹಿಂದೆ ಮಾಡಿದ್ದ ಟ್ವೀಟ್ ಪರಿಗಣಿಸದಂತೆ ಹಾಗೂ ಪ್ರಧಾನಿ ಮೋದಿ ಖಾತೆಯಿಂದ ಬಿಟ್ ಕಾಯಿನ್ ಸಂಬಂಧ ಮಾಡಲಾದ ಟ್ವೀಟರ್ ಲಿಂಕ್ ಶೇರ್ ಮಾಡದಂತೆ ಮನವಿ ಮಾಡಿದೆ.

ನಿನ್ನೆ ರಾತ್ರಿ ಪ್ರಧಾನಿ ಮೋದಿ ಅವರ ಟ್ವೀಟರ್ ಖಾತೆ ಹ್ಯಾಕ್ ಮಾಡಿ, ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆಗೆ ಕಾನೂನು ಬದ್ದಗೊಳಿಸಲಾಗಿದೆ. ಸರ್ಕಾರ ಅಧಿಕೃತವಾಗಿ 500 ಬಿಟ್ ಕಾಯಿನ್ ಗಳನ್ನು ಖರೀದಿಸಿದೆ. ಇವುಗಳನ್ನು ದೇಶದ ಪ್ರಜೆಗಳಿಗೆ ಹಂಚುವುದಾಗಿ ಪ್ರಧಾನಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿತ್ತು.